logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

2 hrs ago
user_ಶಿವು.ಎಸ್ ದೊಡ್ಡಆಲಹಳ್ಳಿ
ಶಿವು.ಎಸ್ ದೊಡ್ಡಆಲಹಳ್ಳಿ
Local News Reporter ಕನಕಪುರ, ರಾಮನಗರ, ಕರ್ನಾಟಕ•
2 hrs ago

ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

More news from ಕರ್ನಾಟಕ and nearby areas
  • ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ ಮಳವಳ್ಳಿ : ತಾಲ್ಲೂಕಿನ‌ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ ಸೆಪ್ಟಂಬರ್ 18 ರಂದು ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. 18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.
    1
    ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ
ಮಳವಳ್ಳಿ : ತಾಲ್ಲೂಕಿನ‌ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ   ಸೆಪ್ಟಂಬರ್ 18 ರಂದು  ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.  18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್  ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು  ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • ಮುಂದಿನ ಚುನಾವಣೆಗೆ ಬಿಜೆಪಿಯಿಂದ ಕೆಆರ್ ಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ವಿಚಾರ ಮಾಜಿ ಶಾಸಕ ನಂದೀಶ್ ರೆಡ್ಡಿ ಏನ್ ಹೇಳಿದ್ರು ಗೊತ್ತಾ!
    1
    ಮುಂದಿನ ಚುನಾವಣೆಗೆ ಬಿಜೆಪಿಯಿಂದ ಕೆಆರ್ ಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ವಿಚಾರ ಮಾಜಿ ಶಾಸಕ ನಂದೀಶ್ ರೆಡ್ಡಿ ಏನ್ ಹೇಳಿದ್ರು ಗೊತ್ತಾ!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಭಟ್ಕಳದಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ, ಮದರಸಾಗೆ ಕಲ್ಲು ತೂರಾಟ ಕಿಟಕಿ ಗಾಜುಗಳಿಗೆ ಹಾನಿ; ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಭಟ್ಕಳದಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ, ಮದರಸಾಗೆ ಕಲ್ಲು ತೂರಾಟ ಕಿಟಕಿ ಗಾಜುಗಳಿಗೆ ಹಾನಿ; ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
    1
    ಭಟ್ಕಳದಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ, ಮದರಸಾಗೆ ಕಲ್ಲು ತೂರಾಟ
ಕಿಟಕಿ ಗಾಜುಗಳಿಗೆ ಹಾನಿ; ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಭಟ್ಕಳದಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ, ಮದರಸಾಗೆ ಕಲ್ಲು ತೂರಾಟ
ಕಿಟಕಿ ಗಾಜುಗಳಿಗೆ ಹಾನಿ; ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ:ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಬೆಂಗಳೂರು:ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು,ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.ರಾಗಿಣಿ ಡ್ಯಾನ್ಸ್‌ಗೆ ಕೆಆರ್ ಪುರದ ಜನತೆ ಫಿದಾ ಆಗಿದ್ದಾರೆ.ಶ್ರೀ ಕೋಟೆ ವೆಂಕಟೇಶ್ವರ ಗೆಳೆಯರ ಬಳಗದಿಂದ ಅದ್ದೂರಿ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಈ ವೇಳೆ ಮಾತನಾಡಿದ ನಟಿ ರಾಗಿಣಿ ,ಗಣೇಶ ಹಬ್ಬ ಆಚರಣೆ ಅಂದ್ರೆ ತುಂಬಾನೇ ಖುಷಿ ನಮ್ಮ ಮನೆ ದೇವರು.ಇನ್ನೂ ಕೆಆರ್ ಪುರ ಭಾಗ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಏರಿಯಾ.ಈ ಭಾಗದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ ಸಂತಸ ತಂದಿದೆ.ಇದೇ ರೀತಿ ಗಣೇಶೋತ್ಸವ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ನಟಿ ರಾಗಿಣಿಗೆ ಹೇಳಿದ್ದಾರೆ.ಈ ವೇಳಿ ನಟಿ ರಾಗಿಣಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಆಯೋಜಕರಾದ ನಿಖಿಲ್ ಹಾಗೂ ದರ್ಶನ್ ಸಾಥ್ ನೀಡಿದರು.
    1
    ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ:ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್
ಬೆಂಗಳೂರು:ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು,ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.ರಾಗಿಣಿ ಡ್ಯಾನ್ಸ್‌ಗೆ  ಕೆಆರ್ ಪುರದ ಜನತೆ ಫಿದಾ ಆಗಿದ್ದಾರೆ.ಶ್ರೀ ಕೋಟೆ ವೆಂಕಟೇಶ್ವರ ಗೆಳೆಯರ ಬಳಗದಿಂದ ಅದ್ದೂರಿ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಈ ವೇಳೆ ಮಾತನಾಡಿದ ನಟಿ ರಾಗಿಣಿ ,ಗಣೇಶ ಹಬ್ಬ ಆಚರಣೆ ಅಂದ್ರೆ ತುಂಬಾನೇ ಖುಷಿ  ನಮ್ಮ ಮನೆ ದೇವರು.ಇನ್ನೂ ಕೆಆರ್ ಪುರ ಭಾಗ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಏರಿಯಾ.ಈ ಭಾಗದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ ಸಂತಸ ತಂದಿದೆ.ಇದೇ ರೀತಿ ಗಣೇಶೋತ್ಸವ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ನಟಿ ರಾಗಿಣಿಗೆ ಹೇಳಿದ್ದಾರೆ.ಈ ವೇಳಿ ನಟಿ ರಾಗಿಣಿಗೆ  ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಆಯೋಜಕರಾದ ನಿಖಿಲ್ ಹಾಗೂ ದರ್ಶನ್ ಸಾಥ್ ನೀಡಿದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ​ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬಿಸಿಲಿನ ಬೇಗೆ ಹಾಗೂ ಮಳೆಯೇ ಕಾಣದ ಕಾರಣ ತತ್ತರಿಸಿ ಹೋಗಿದ್ದ ಹನೂರು ತಾಲೂಕಿನ ರೈತ ಕುಲಕ್ಕೆ ಮಳೆರಾಯ ಕರುಣೆ ತೋರಿದ್ದಾನೆ. ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ವರುಣನ ಅಬ್ಬರದಿಂದಾಗಿ ದೀರ್ಘಕಾಲದಿಂದ ಮಳೆಯಿಲ್ಲದೆ ಕಂಗೆಟ್ಟು ಹೋಗಿದ್ದ ಜನ-ಜಾನುವಾರುಗಳು ಹಾಗೂ ರೈತರು ನಿಟ್ಟುಸಿರು ಬಿಡುವಂತಾಗಿದೆ. ​ಕುಡಿಯುವ ನೀರಿಗೂ ಬರೆ, ಬೋರ್‌ವೆಲ್‌ಗಳು ಡ್ರೈ: ತಾಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಅಂತರ್ಜಲ ಕುಸಿದು ಹೋಗಿತ್ತು. ಕೊಳವೆಬಾವಿಗಳಲ್ಲಿ (ಬೋರ್‌ವೆಲ್) ನೀರು ಸಿಗದೆ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವು. ಕುಡಿಯಲು ಕೂಡ ನೀರಿಲ್ಲದೆ ಗ್ರಾಮಸ್ಥರು ಮತ್ತು ಜಾನುವಾರುಗಳು ಪರದಾಡುವಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರ ಕಣ್ಣೀರು ನೋಡಲಾರದಂತ ಸ್ಥಿತಿ ತಾಲೂಕಿನ ಹಲವು ಗ್ರಾಮಗಳಲ್ಲಿ ನೆಲೆಸಿತ್ತು. ​ಮಳೆರಾಯನ ಆಗಮನ - ರೈತರ ಮೊಗದಲ್ಲಿ ನಗು: ಸಕಾಲಕ್ಕೆ ಮಳೆಯಾಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದ ಹತಾಶ ಸ್ಥಿತಿಯಲ್ಲಿದ್ದ ರೈತರಿಗೆ ಈಗ ಸುರಿದಿರುವ ಉತ್ತಮ ಮಳೆ ಸಂಜೀವಿನಿಯಾಗಿ ಪರಿಣಮಿಸಿದೆ. ಒಣಗಿ ಹೋಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದ್ದು, ಗಿಡ-ಮರಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವ ವಿಶ್ವಾಸ ಮೂಡಿದ್ದು, ಬತ್ತಿಹೋಗಿದ್ದ ಬೋರ್‌ವೆಲ್‌ಗಳೂ ಮರುಜೀವ ಪಡೆಯುವ ನಿರೀಕ್ಷೆಯಿದೆ. ​ಚುರುಕುಗೊಂಡ ಕೃಷಿ ಚಟುವಟಿಕೆಗಳು: ಮಳೆಯ ಅಬ್ಬರದಿಂದ ವಾತಾವರಣ ಸಂಪೂರ್ಣ ತಂಪಾಗಿದ್ದು, ಎಲ್ಲೆಡೆ ನಳನಳಿಸುತ್ತಿರುವ ಹಸಿರು ಕಣ್ಣಿಗೆ ತಂಪು ನೀಡಿದೆ. ಮಳೆಯಿಂದಾಗಿ ರೈತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಭರ್ಜರಿಯಾಗಿ ಚುರುಕುಗೊಂಡಿವೆ. ವರುಣನ ಕೃಪೆಯಿಂದ ಒಟ್ಟಾರೆಯಾಗಿ ಹನೂರು ತಾಲೂಕಿನಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಅನ್ನದಾತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
    4
    ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ

ಹನೂರು ತಾಲೂಕಿನಲ್ಲಿ ವರುಣ ದೇವನ ಕೃಪೆ: ಒಣಗುತ್ತಿದ್ದ ಬೆಳೆಗಳಿಗೆ ಮರುಜೀವ, ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ
​ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ
ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬಿಸಿಲಿನ ಬೇಗೆ ಹಾಗೂ ಮಳೆಯೇ ಕಾಣದ ಕಾರಣ ತತ್ತರಿಸಿ ಹೋಗಿದ್ದ ಹನೂರು ತಾಲೂಕಿನ ರೈತ ಕುಲಕ್ಕೆ ಮಳೆರಾಯ ಕರುಣೆ ತೋರಿದ್ದಾನೆ. ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ವರುಣನ ಅಬ್ಬರದಿಂದಾಗಿ ದೀರ್ಘಕಾಲದಿಂದ ಮಳೆಯಿಲ್ಲದೆ ಕಂಗೆಟ್ಟು ಹೋಗಿದ್ದ ಜನ-ಜಾನುವಾರುಗಳು ಹಾಗೂ ರೈತರು ನಿಟ್ಟುಸಿರು ಬಿಡುವಂತಾಗಿದೆ.
​ಕುಡಿಯುವ ನೀರಿಗೂ ಬರೆ, ಬೋರ್‌ವೆಲ್‌ಗಳು ಡ್ರೈ:
ತಾಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಅಂತರ್ಜಲ ಕುಸಿದು ಹೋಗಿತ್ತು. ಕೊಳವೆಬಾವಿಗಳಲ್ಲಿ (ಬೋರ್‌ವೆಲ್) ನೀರು ಸಿಗದೆ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವು. ಕುಡಿಯಲು ಕೂಡ ನೀರಿಲ್ಲದೆ ಗ್ರಾಮಸ್ಥರು ಮತ್ತು ಜಾನುವಾರುಗಳು ಪರದಾಡುವಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರ ಕಣ್ಣೀರು ನೋಡಲಾರದಂತ ಸ್ಥಿತಿ ತಾಲೂಕಿನ ಹಲವು ಗ್ರಾಮಗಳಲ್ಲಿ ನೆಲೆಸಿತ್ತು.
​ಮಳೆರಾಯನ ಆಗಮನ - ರೈತರ ಮೊಗದಲ್ಲಿ ನಗು:
ಸಕಾಲಕ್ಕೆ ಮಳೆಯಾಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದ ಹತಾಶ ಸ್ಥಿತಿಯಲ್ಲಿದ್ದ ರೈತರಿಗೆ ಈಗ ಸುರಿದಿರುವ ಉತ್ತಮ ಮಳೆ ಸಂಜೀವಿನಿಯಾಗಿ ಪರಿಣಮಿಸಿದೆ. ಒಣಗಿ ಹೋಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದ್ದು, ಗಿಡ-ಮರಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವ ವಿಶ್ವಾಸ ಮೂಡಿದ್ದು, ಬತ್ತಿಹೋಗಿದ್ದ ಬೋರ್‌ವೆಲ್‌ಗಳೂ ಮರುಜೀವ ಪಡೆಯುವ ನಿರೀಕ್ಷೆಯಿದೆ.
​ಚುರುಕುಗೊಂಡ ಕೃಷಿ ಚಟುವಟಿಕೆಗಳು:
ಮಳೆಯ ಅಬ್ಬರದಿಂದ ವಾತಾವರಣ ಸಂಪೂರ್ಣ ತಂಪಾಗಿದ್ದು, ಎಲ್ಲೆಡೆ ನಳನಳಿಸುತ್ತಿರುವ ಹಸಿರು ಕಣ್ಣಿಗೆ ತಂಪು ನೀಡಿದೆ. ಮಳೆಯಿಂದಾಗಿ ರೈತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಭರ್ಜರಿಯಾಗಿ ಚುರುಕುಗೊಂಡಿವೆ. ವರುಣನ ಕೃಪೆಯಿಂದ ಒಟ್ಟಾರೆಯಾಗಿ ಹನೂರು ತಾಲೂಕಿನಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಅನ್ನದಾತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ. ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ. ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ. ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ. ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ. ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ. ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ. ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ.
    2
    ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ.
ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ.
ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ.
ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ.
ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ.
ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ.
ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ.
ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    23 hrs ago
  • ಮಳೆ ಇಲ್ಲದೆ ಬರದ ಭವಣೆಯಲ್ಲಿ ಬೆಂದು ಬೆಂಗಾಡಾಗಿದ್ದ ತಾಲ್ಲೂಕಿಗೆ ಮಂಗಳವಾರ ತಂಪೆರೆದ ವರುಣದೇವ ಮಳವಳ್ಳಿ : ಕಳೆದ ಕೆಲವಾರು ತಿಂಗಳಿಂದ ಮಳೆಯ ಸುಳಿವೇ ಕಾಣದೆ ಸುಡು ಬಿಸಿಲ ಝಳ ದಿಂದ ಕಾದ ಬೆಂಗಾಡಾಗಿ ಹೋಗಿದ್ದ ಮಳವಳ್ಳಿ ತಾಲ್ಲೂಕಿಗೆ ಮಂಗಳವಾರ ರಾತ್ರಿ ವರುಣ ದೇವ ಕೃಪೆ ತೋರಿದ್ದು ಒಂದು ಗಂಟೆಗೂ ಹೆಚ್ಚುಕಾಲ ಸುರಿದ ಅಬ್ಬರದ ಮಳೆ ಒಣಗಿದ ಭೂಮಿಗೆ ತಂಪೆರದಿದೆ. ಮಂಗಳವಾರ ತಡರಾತ್ರಿ 9.30 ರ ಸುಮಾರಿಗೆ ಆರಂಭವಾದ ಸಿಡಿಲಬ್ಬರದ ಮಳೆ ಕಾದ ಕಬ್ಬಿಣದಂತಾಗಿದ್ದ ಭೂಮಿಗೆ ತಂಪೆರದಿದ್ದು ಬಿಸಿಲ ಝಳ ದಿಂದ ಬೆಂದು ಹೈರಾಣಾಗಿದ್ದ ಜನ ನಿಟ್ಟುಸಿರು ಬಿಡುವಂತಾ ಗಿದ್ದರೆ ತಡವಾಗಿಯಾದರೂ ಜೋರಾಗಿಯೇ ಸುರಿದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸುಮಾರು ಒಂದುವರೆ ಗಂಟೆ ಸುರಿದ ಅಬ್ಬರದ ಮಳೆ ಹಾಗೂ ಸಿಡಿಲು ಗುಡುಗು ಸಹಿತದ ಮಳೆ ಇಡೀ ತಾಲ್ಲೂಕಿಗೆ ತಂಪೆರೆದಿದೆ. ನಂತರದಲ್ಲಿ ಇಡೀ ರಾತ್ರಿ ಸಣ್ಣದಾಗಿ ಸುರಿದ ಜಿಟಿಜಿಟಿ ಮಳೆ ಭೂಮಿಯ ಕಾವು ತಗ್ಗಿಸಿದೆ. ಒಟ್ಟಾರೆ ಈ ವರ್ಷವಿಡೀ ಭೂತಾಯಿ ಒಡಲು ತುಂಬುವ ಮಟ್ಟದ ಮಳೆಯನ್ನೇ ಕಾಣದ ಬರದ ಭವಣೆಯಿಂದ ಆತಂಕಕ್ಕೆ ಒಳಗಾಗಿದ್ದ ಜನ ಮಂಗಳವಾರ ಸುರಿದ ಭಾರಿ ಮಳೆಯಿಂದ ಸಮಾಧಾನ ಪಡುವಂತಾಗಿದೆ.
    1
    ಮಳೆ ಇಲ್ಲದೆ ಬರದ ಭವಣೆಯಲ್ಲಿ ಬೆಂದು ಬೆಂಗಾಡಾಗಿದ್ದ ತಾಲ್ಲೂಕಿಗೆ ಮಂಗಳವಾರ ತಂಪೆರೆದ ವರುಣದೇವ
ಮಳವಳ್ಳಿ : ಕಳೆದ ಕೆಲವಾರು ತಿಂಗಳಿಂದ ಮಳೆಯ ಸುಳಿವೇ ಕಾಣದೆ ಸುಡು ಬಿಸಿಲ ಝಳ ದಿಂದ ಕಾದ ಬೆಂಗಾಡಾಗಿ ಹೋಗಿದ್ದ ಮಳವಳ್ಳಿ ತಾಲ್ಲೂಕಿಗೆ ಮಂಗಳವಾರ ರಾತ್ರಿ ವರುಣ ದೇವ ಕೃಪೆ ತೋರಿದ್ದು ಒಂದು ಗಂಟೆಗೂ ಹೆಚ್ಚುಕಾಲ ಸುರಿದ ಅಬ್ಬರದ ಮಳೆ ಒಣಗಿದ ಭೂಮಿಗೆ ತಂಪೆರದಿದೆ. ಮಂಗಳವಾರ ತಡರಾತ್ರಿ 9.30 ರ ಸುಮಾರಿಗೆ ಆರಂಭವಾದ ಸಿಡಿಲಬ್ಬರದ ಮಳೆ ಕಾದ ಕಬ್ಬಿಣದಂತಾಗಿದ್ದ ಭೂಮಿಗೆ ತಂಪೆರದಿದ್ದು ಬಿಸಿಲ ಝಳ ದಿಂದ ಬೆಂದು ಹೈರಾಣಾಗಿದ್ದ ಜನ ನಿಟ್ಟುಸಿರು ಬಿಡುವಂತಾ ಗಿದ್ದರೆ ತಡವಾಗಿಯಾದರೂ ಜೋರಾಗಿಯೇ ಸುರಿದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸುಮಾರು ಒಂದುವರೆ ಗಂಟೆ ಸುರಿದ ಅಬ್ಬರದ ಮಳೆ ಹಾಗೂ ಸಿಡಿಲು ಗುಡುಗು ಸಹಿತದ ಮಳೆ ಇಡೀ ತಾಲ್ಲೂಕಿಗೆ ತಂಪೆರೆದಿದೆ. ನಂತರದಲ್ಲಿ ಇಡೀ ರಾತ್ರಿ ಸಣ್ಣದಾಗಿ ಸುರಿದ ಜಿಟಿಜಿಟಿ ಮಳೆ ಭೂಮಿಯ ಕಾವು ತಗ್ಗಿಸಿದೆ. ಒಟ್ಟಾರೆ ಈ ವರ್ಷವಿಡೀ ಭೂತಾಯಿ ಒಡಲು  ತುಂಬುವ ಮಟ್ಟದ ಮಳೆಯನ್ನೇ ಕಾಣದ ಬರದ ಭವಣೆಯಿಂದ ಆತಂಕಕ್ಕೆ ಒಳಗಾಗಿದ್ದ ಜನ ಮಂಗಳವಾರ ಸುರಿದ ಭಾರಿ ಮಳೆಯಿಂದ ಸಮಾಧಾನ ಪಡುವಂತಾಗಿದೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    21 hrs ago
  • ಇಷ್ಟು ದಿನವಿಲ್ಲದ ನಿಮ್ಹಾನ್ಸ್ ಆಸ್ಪತ್ರೆ ವಿಚಾರ ಈಗ ಯಾಕೆ ಎಂಬ ಪ್ರಶ್ನೆಗೆ ಮಾಜಿ ಶಾಸಕ ನಂದೀಶ್ ರೆಡ್ಡಿ ಪ್ರತಿಕ್ರಿಯೆ
    1
    ಇಷ್ಟು ದಿನವಿಲ್ಲದ ನಿಮ್ಹಾನ್ಸ್ ಆಸ್ಪತ್ರೆ ವಿಚಾರ ಈಗ ಯಾಕೆ ಎಂಬ ಪ್ರಶ್ನೆಗೆ ಮಾಜಿ ಶಾಸಕ ನಂದೀಶ್ ರೆಡ್ಡಿ ಪ್ರತಿಕ್ರಿಯೆ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ವಿಶೇಷವಾದ ಹೆಲ್ಮೆಟ್ ಗಣಪತಿ ಮೂರ್ತಿ ವಿಸರ್ಜನೆ ಬೆಂಗಳೂರು:ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ಇಟ್ಟಿದ್ದ ವಿಶೇಷ ಹೆಲ್ಮೆಟ್ ಗಣಪತಿಯನ್ನ ವಿಸರ್ಜನೆ ಮಾಡಲಾಗಿದೆ.ಇತ್ತಿಚೆಗೆ ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸವಾರರ ಮರಣದ ಪ್ರಮಾಣ ಹೆಚ್ಚಳ ಹಿನ್ನೆಲೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಹೆಲ್ಮೆಟ್ ಗಣಪತಿ ಯುವಕರು ಕೂರಿಸಿದ್ದರು.ಲಕ್ಕಿ ವಿನಾಯಕ ಗೆಳೆಯರ ಬಳಗದಿಂದ ತಾಯಿ ಗೌರಮ್ಮ ಮಗ ಗಣಪನಿಗೆ ಹೆಲ್ಮೆಟ್ ನೀಡುವ ಮಾದರಿ ಗಣೇಶನ ಕೂರಿಸಿ ಜಾಗೃತಿ ಮೂಡಿಸಲಾಗಿದ್ದು,ವಿಸರ್ಜನೆಗೆ ಮುನ್ನ ವಾಹನ ಸವಾರರು ಹೆಲ್ಮೆಟ್ ಧರಿಸುವಂತೆ ಘೋಷಣೆ ಕೂಗಿ ಯುವಕರು ಗಣೇಶನನ್ನ ವಿಸರ್ಜನೆ ಮಾಡಿದರು.
    1
    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ವಿಶೇಷವಾದ ಹೆಲ್ಮೆಟ್ ಗಣಪತಿ ಮೂರ್ತಿ ವಿಸರ್ಜನೆ
ಬೆಂಗಳೂರು:ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ಇಟ್ಟಿದ್ದ ವಿಶೇಷ ಹೆಲ್ಮೆಟ್ ಗಣಪತಿಯನ್ನ ವಿಸರ್ಜನೆ ಮಾಡಲಾಗಿದೆ.ಇತ್ತಿಚೆಗೆ ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸವಾರರ ಮರಣದ ಪ್ರಮಾಣ ಹೆಚ್ಚಳ ಹಿನ್ನೆಲೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಹೆಲ್ಮೆಟ್ ಗಣಪತಿ ಯುವಕರು ಕೂರಿಸಿದ್ದರು.ಲಕ್ಕಿ ವಿನಾಯಕ ಗೆಳೆಯರ ಬಳಗದಿಂದ ತಾಯಿ ಗೌರಮ್ಮ ಮಗ ಗಣಪನಿಗೆ ಹೆಲ್ಮೆಟ್ ನೀಡುವ ಮಾದರಿ ಗಣೇಶನ ಕೂರಿಸಿ ಜಾಗೃತಿ ಮೂಡಿಸಲಾಗಿದ್ದು,ವಿಸರ್ಜನೆಗೆ ಮುನ್ನ ವಾಹನ ಸವಾರರು ಹೆಲ್ಮೆಟ್ ಧರಿಸುವಂತೆ ಘೋಷಣೆ ಕೂಗಿ ಯುವಕರು ಗಣೇಶನನ್ನ ವಿಸರ್ಜನೆ ಮಾಡಿದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.