ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ಮಾದರಿ ಗ್ರಾಮದ ಪಿ.ಎಂ. ಶ್ರೀ ಜವಾಹರ್ ನವೋದಯ ವಿದ್ಯಾಲಯದ ಆವರಣದಲ್ಲಿ ಶಾಲೆಯ 14ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಸಿರು ಪರಿಸರ ನಿರ್ಮಾಣಕ್ಕಾಗಿ ಇತ್ತೀಚೆಗೆ ಸಸಿ ನೆಡುವ ಹಸಿರು ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯಲ್ಲಿ ಕಲಿತ "ಮನೆಗೊಂದು ಮರ ಊರಿಗೊಂದು ವನ" ಎಂಬ ಆಶಯದಂತೆ ಹಾಗೂ ಪರಿಸರ ಕಾಳಜಿಯಿಂದ 14ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಆವರಣದ ತುಂಬಾ ಹಲಸು, ನೇರಳೆ, ಹೊನ್ನೆ, ಹೊಂಗೆ, ಬೇವು ಮತ್ತು ನೆಲ್ಲಿಯಂತಹ ವಿವಿಧ ಜಾತಿಯ ಸಸಿಗಳನ್ನು ನೆಟ್ಟರು. ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾದ ಬೇವು, ಬನ್ನಿ, ಬಿಲ್ವ, ಅರಳಿ ಮತ್ತು ಅತ್ತಿ ಮರಗಳನ್ನೊಳಗೊಂಡ "ಪಂಚವಟಿ" ತೋಟವು ಈ ಅಭಿಯಾನದ ಪ್ರಮುಖ ಆಕರ್ಷಣೆಯಾಗಿತ್ತು. ಈ ಸಸಿಗಳು ಮುಂದಿನ ದಿನಗಳಲ್ಲಿ ಶಾಲೆಯ ಸೌಂದರ್ಯ ಹಾಗೂ ಪರಿಸರ ಸಮತೋಲನವನ್ನು ಹೆಚ್ಚಿಸಲಿವೆ ಎಂಬ ಆಶಯ ಎಲ್ಲರದಾಗಿದ್ದು, ನೆಟ್ಟ ಸಸಿಗಳನ್ನು ಪೋಷಿಸುವ ಜವಾಬ್ದಾರಿಯನ್ನು ಶಾಲೆಯ ವಿದ್ಯಾರ್ಥಿಗಳು ವಹಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಶಾಲೆಯ ಉಪ-ಪ್ರಾಂಶುಪಾಲರು ಸಾಂಪ್ರದಾಯಿಕವಾಗಿ ಗಿಡ ನೆಟ್ಟು ನೀರುಣಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ 14ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ. ರಾಜವಾಳ ಜಾಕ್‌ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.1
- ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.1
- ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್‌ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್‌ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)4
- ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮತಕ್ಷೇತ್ರದ ಸುಲ್ತಾನಿಪುರ ಗ್ರಾಮದಲ್ಲಿ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ ಚಂದ್ರಪ್ಪ ಅವರು ಇಂದು ಚಾಲನೆ ನೀಡಿದ್ದಾರೆ. ₹1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ರಸ್ತೆ ಕಾಮಗಾರಿಯನ್ನು ಅತ್ಯಂತ ಉತ್ತಮ ಗುಣಮಟ್ಟದಲ್ಲಿ ಮಾಡಿ ಮುಗಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಶಾಸಕ ಎಂ ಚಂದ್ರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.1
- ಚಿತ್ರದುರ್ಗದಲ್ಲಿ ಕರಡಿಯೊಂದು ಓಡಿ ಬಂದಾಗ, ಜನರು ಅದರಿಂದ ದೂರ ಓಡುವ ಬದಲು ಅದರ ಹಿಂದೆಯೇ ಓಡಿದ್ದಾರೆ. ಇಲ್ಲಿ ಕರಡಿಯನ್ನು ನೋಡಿ ಹೆದರಿ ಓಡುವ ಬದಲು ಗ್ರಾಮಸ್ಥರೇ ಅದರ ಬೆನ್ನತ್ತಿ ಹಿಂದೆ ಓಡಿರುವ ಘಟನೆ ನಡೆದಿದೆ.1
- ಮಹಾರಾಷ್ಟ್ರದ ಥಾಣೆಯಲ್ಲಿ ಹಳೆಯ ಮನೆಯೊಂದರ ಭಾಗ ಕುಸಿದು ಬಿದ್ದ ಪರಿಣಾಮ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. ಥಾಣೆಯ ಬ್ರಹ್ಮಾಂಡ್‌ನ ಆಜಾದ್ ನಗರದಲ್ಲಿರುವ ಮದ್ರಾಸ್ ಚಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3:35 ಕ್ಕೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ಈ ನೆಲ ಮಹಡಿ ಮತ್ತು ಮೊದಲ ಮಹಡಿಯ ಕಟ್ಟಡವು ಸುಮಾರು 25 ರಿಂದ 30 ವರ್ಷಗಳಷ್ಟು ಹಳೆಯದಾಗಿದೆ.1