ಬಡ ಕುಟುಂಬಕ್ಕೆ ಸೂರು; ಮಾನವೀಯತೆಗೆ ರಾಜೇಂದ್ರ ಪ್ರಸಾದ್ ಮಾದರಿ, ₹2 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ: ಆಗಸ್ಟ್ 30 ರಂದು ಹರ್ಷ ಸಾಯಿ ಅವರ ಅಮೃತ ಹಸ್ತದಿಂದ ಉದ್ಘಾಟನೆಯಾಗಲಿದೆ ಬಂಗಾರಪೇಟೆ: ಹಣ, ಅಂತಸ್ತು ಹಾಗೂ ಆಸ್ತಿ ಸಂಪಾದನೆಯ ಹಿಂದೆ ಓಡುವ ಇಂದಿನ ಕಾಲಘಟ್ಟದಲ್ಲಿ, ಕಷ್ಟದಲ್ಲಿರುವವರ ಕಣ್ಣೀರೊರೆಸುವ ಮಾನವೀಯ ಮನೋಭಾವ ಅಪರೂಪವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಡ ಕುಟುಂಬವೊಂದರ ಸಂಕಷ್ಟವನ್ನು ಅರಿತು ಸ್ವಂತ ಹಣದಲ್ಲಿ ಮನೆ ನಿರ್ಮಿಸಿಕೊಡುವ ಮೂಲಕ ಬಂಗಾರಪೇಟೆ ತಾಲೂಕಿನ ನೆರಳೆಕೆರೆ ಗ್ರಾಮದ ರಾಜೇಂದ್ರ ಪ್ರಸಾದ್ ಮಾನವೀಯತೆಗೆ ಮಾದರಿಯಾಗಿದ್ದಾರೆ. ನೆರಳೆಕೆರೆ ಗ್ರಾಮದ ಶ್ರೀನಿವಾಸ್ ಹಾಗೂ ಮಾಧವಿ ದಂಪತಿಯ ಪುತ್ರರಾದ ರಾಜೇಂದ್ರ ಪ್ರಸಾದ್, ಬಂಗಾರಪೇಟೆ ಪಟ್ಟಣದ ಪಲವತಿಮ್ಮನಹಳ್ಳಿಯಲ್ಲಿ ಚಮ್ಮಾರ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಮಂಜುಳ ಅವರ ಕುಟುಂಬದ ದುಸ್ಥಿತಿಯನ್ನು ಗಮನಿಸಿ ಸುಮಾರು ₹2 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಿಕೊಟ್ಟಿದ್ದಾರೆ. ಮಂಜುಳ ಅವರು ಮನೆ ಇಲ್ಲದೆ ಮಕ್ಕಳೊಂದಿಗೆ ಅವ್ಯವಸ್ಥಿತ ಗುಡಿಸಲಿನಲ್ಲಿ ಜೀವನ ನಡೆಸುತ್ತಿದ್ದರು. ಮಳೆ ಬಂದಾಗ ಮನೆ ಸೋರುತ್ತಿದ್ದಲ್ಲದೆ, ಹಾವು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕುಟುಂಬದ ಪರಿಸ್ಥಿತಿಯನ್ನು ಕಂಡ ರಾಜೇಂದ್ರ ಪ್ರಸಾದ್ ಆರಂಭದಲ್ಲಿ ತಾರ್ಪಾಲು ಒದಗಿಸಲು ಮುಂದಾಗಿದ್ದರು. ಆದರೆ ಅಲ್ಲಿನ ವಾಸ್ತವ ಸ್ಥಿತಿಯನ್ನು ಕಂಡ ಬಳಿಕ ತಾತ್ಕಾಲಿಕ ನೆರವಿಗಿಂತ ಶಾಶ್ವತ ಪರಿಹಾರ ನೀಡಬೇಕೆಂಬ ಉದ್ದೇಶದಿಂದ ಸ್ವಂತ ಖರ್ಚಿನಲ್ಲಿ ಮನೆ ನಿರ್ಮಿಸಲು ನಿರ್ಧರಿಸಿದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ರಾಜೇಂದ್ರ ಪ್ರಸಾದ್, ಬಡವರು ಹಾಗೂ ನಿರ್ಗತಿಕರಿಗೆ ತಮ್ಮ ಕೈಲಾದಷ್ಟು ಆಹಾರ ಸೇರಿದಂತೆ ವಿವಿಧ ರೀತಿಯ ನೆರವು ನೀಡುತ್ತಾ ಬಂದಿದ್ದಾರೆ. ಇದೀಗ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿಕೊಡುವ ಮೂಲಕ ತಮ್ಮ ಸೇವಾ ಕಾರ್ಯಕ್ಕೆ ಮತ್ತೊಂದು ಅರ್ಥ ನೀಡಿದ್ದಾರೆ. ತಮ್ಮ ಸಮಾಜ ಸೇವೆಗೆ ಆಂಧ್ರಪ್ರದೇಶದ ಖ್ಯಾತ ಯೂಟ್ಯೂಬರ್ ಹಾಗೂ ಸಮಾಜ ಸೇವಕ ಹರ್ಷ ಸಾಯಿ ಅವರ ಕಾರ್ಯಗಳು ಪ್ರೇರಣೆಯಾಗಿವೆ ಎಂದು ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ. "ಜೀವನದಲ್ಲಿ ದುದ್ದು, ಕಾಸು, ಕಟ್ಟಡ ಯಾವುದನ್ನೂ ನಮ್ಮೊಂದಿಗೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ನಮ್ಮಿಂದ ನಾಲ್ಕು ಜನರಿಗೆ ಒಳ್ಳೆಯದಾದರೆ ಅದಕ್ಕಿಂತ ಸಂತೋಷ ಮತ್ತೊಂದಿಲ್ಲ. ಹರ್ಷ ಸಾಯಿ ಅವರು ಬಡವರಿಗಾಗಿ ದೊಡ್ಡ ಮಟ್ಟದಲ್ಲಿ ಸೇವೆ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿ ಸಮಾಜ ಸೇವೆ ನಡೆಯಬೇಕು ಎಂಬ ಉದ್ದೇಶದಿಂದ ನನ್ನ ಕೈಲಾದಷ್ಟು ಸೇವೆ ಮಾಡುತ್ತಿದ್ದೇನೆ" ಎಂದು ಅವರು ಹೇಳಿದರು. ಮಂಜುಳ ಅವರ ಕುಟುಂಬಕ್ಕೆ ನಿರ್ಮಿಸಲಾಗಿರುವ ನೂತನ ಮನೆಯ ಉದ್ಘಾಟನಾ ಕಾರ್ಯಕ್ರಮ ಇದೇ ಆಗಸ್ಟ್ 30ರಂದು ನಡೆಯಲಿದ್ದು, ಆಂಧ್ರಪ್ರದೇಶದ ಖ್ಯಾತ ಸಮಾಜ ಸೇವಕ ಹರ್ಷ ಸಾಯಿ ಅವರು ಆಗಮಿಸಿ ತಮ್ಮ ಅಮೃತ ಹಸ್ತದಿಂದ ಮನೆ ಉದ್ಘಾಟಿಸಲಿದ್ದಾರೆ. ಬಡ ಕುಟುಂಬವೊಂದರ ಬದುಕಿಗೆ ಹೊಸ ಸೂರು ಕಲ್ಪಿಸಿರುವ ಈ ಮಾನವೀಯ ಕಾರ್ಯಕ್ಕೆ ಸಾಕ್ಷಿಯಾಗಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಸಮಾಜ ಸೇವಾ ಮನೋಭಾವ ಹೊಂದಿರುವವರು, ಸಾರ್ವಜನಿಕರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕುಟುಂಬದ ಸಂತೋಷದಲ್ಲಿ ಪಾಲುದಾರರಾಗುವ ನಿರೀಕ್ಷೆ ಇದೆ. ಮನೆ ನಿರ್ಮಾಣ ಕಾರ್ಯಕ್ಕೆ ಬಂಗಾರಪೇಟೆ ಹಾಗೂ ಕೋಲಾರ ಭಾಗದ ಹಲವರು ಸಹಕಾರ ನೀಡಿದ್ದು, ಸಹಕರಿಸಿದ ಎಲ್ಲರಿಗೂ ರಾಜೇಂದ್ರ ಪ್ರಸಾದ್ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.
ಬಡ ಕುಟುಂಬಕ್ಕೆ ಸೂರು; ಮಾನವೀಯತೆಗೆ ರಾಜೇಂದ್ರ ಪ್ರಸಾದ್ ಮಾದರಿ, ₹2 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ: ಆಗಸ್ಟ್ 30 ರಂದು ಹರ್ಷ ಸಾಯಿ ಅವರ ಅಮೃತ ಹಸ್ತದಿಂದ ಉದ್ಘಾಟನೆಯಾಗಲಿದೆ ಬಂಗಾರಪೇಟೆ: ಹಣ, ಅಂತಸ್ತು ಹಾಗೂ ಆಸ್ತಿ ಸಂಪಾದನೆಯ ಹಿಂದೆ ಓಡುವ ಇಂದಿನ ಕಾಲಘಟ್ಟದಲ್ಲಿ, ಕಷ್ಟದಲ್ಲಿರುವವರ ಕಣ್ಣೀರೊರೆಸುವ ಮಾನವೀಯ ಮನೋಭಾವ ಅಪರೂಪವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಡ ಕುಟುಂಬವೊಂದರ ಸಂಕಷ್ಟವನ್ನು ಅರಿತು ಸ್ವಂತ ಹಣದಲ್ಲಿ ಮನೆ ನಿರ್ಮಿಸಿಕೊಡುವ ಮೂಲಕ ಬಂಗಾರಪೇಟೆ ತಾಲೂಕಿನ ನೆರಳೆಕೆರೆ ಗ್ರಾಮದ ರಾಜೇಂದ್ರ ಪ್ರಸಾದ್ ಮಾನವೀಯತೆಗೆ ಮಾದರಿಯಾಗಿದ್ದಾರೆ. ನೆರಳೆಕೆರೆ ಗ್ರಾಮದ ಶ್ರೀನಿವಾಸ್ ಹಾಗೂ ಮಾಧವಿ ದಂಪತಿಯ ಪುತ್ರರಾದ ರಾಜೇಂದ್ರ ಪ್ರಸಾದ್, ಬಂಗಾರಪೇಟೆ ಪಟ್ಟಣದ ಪಲವತಿಮ್ಮನಹಳ್ಳಿಯಲ್ಲಿ ಚಮ್ಮಾರ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಮಂಜುಳ ಅವರ ಕುಟುಂಬದ ದುಸ್ಥಿತಿಯನ್ನು ಗಮನಿಸಿ ಸುಮಾರು ₹2 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಿಕೊಟ್ಟಿದ್ದಾರೆ. ಮಂಜುಳ ಅವರು ಮನೆ ಇಲ್ಲದೆ ಮಕ್ಕಳೊಂದಿಗೆ ಅವ್ಯವಸ್ಥಿತ ಗುಡಿಸಲಿನಲ್ಲಿ ಜೀವನ ನಡೆಸುತ್ತಿದ್ದರು. ಮಳೆ ಬಂದಾಗ ಮನೆ ಸೋರುತ್ತಿದ್ದಲ್ಲದೆ, ಹಾವು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕುಟುಂಬದ ಪರಿಸ್ಥಿತಿಯನ್ನು ಕಂಡ ರಾಜೇಂದ್ರ ಪ್ರಸಾದ್ ಆರಂಭದಲ್ಲಿ ತಾರ್ಪಾಲು ಒದಗಿಸಲು ಮುಂದಾಗಿದ್ದರು. ಆದರೆ ಅಲ್ಲಿನ ವಾಸ್ತವ ಸ್ಥಿತಿಯನ್ನು ಕಂಡ ಬಳಿಕ ತಾತ್ಕಾಲಿಕ ನೆರವಿಗಿಂತ ಶಾಶ್ವತ ಪರಿಹಾರ ನೀಡಬೇಕೆಂಬ ಉದ್ದೇಶದಿಂದ ಸ್ವಂತ ಖರ್ಚಿನಲ್ಲಿ ಮನೆ ನಿರ್ಮಿಸಲು ನಿರ್ಧರಿಸಿದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ರಾಜೇಂದ್ರ ಪ್ರಸಾದ್, ಬಡವರು ಹಾಗೂ ನಿರ್ಗತಿಕರಿಗೆ ತಮ್ಮ ಕೈಲಾದಷ್ಟು ಆಹಾರ ಸೇರಿದಂತೆ ವಿವಿಧ ರೀತಿಯ ನೆರವು
ನೀಡುತ್ತಾ ಬಂದಿದ್ದಾರೆ. ಇದೀಗ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿಕೊಡುವ ಮೂಲಕ ತಮ್ಮ ಸೇವಾ ಕಾರ್ಯಕ್ಕೆ ಮತ್ತೊಂದು ಅರ್ಥ ನೀಡಿದ್ದಾರೆ. ತಮ್ಮ ಸಮಾಜ ಸೇವೆಗೆ ಆಂಧ್ರಪ್ರದೇಶದ ಖ್ಯಾತ ಯೂಟ್ಯೂಬರ್ ಹಾಗೂ ಸಮಾಜ ಸೇವಕ ಹರ್ಷ ಸಾಯಿ ಅವರ ಕಾರ್ಯಗಳು ಪ್ರೇರಣೆಯಾಗಿವೆ ಎಂದು ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ. "ಜೀವನದಲ್ಲಿ ದುದ್ದು, ಕಾಸು, ಕಟ್ಟಡ ಯಾವುದನ್ನೂ ನಮ್ಮೊಂದಿಗೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ನಮ್ಮಿಂದ ನಾಲ್ಕು ಜನರಿಗೆ ಒಳ್ಳೆಯದಾದರೆ ಅದಕ್ಕಿಂತ ಸಂತೋಷ ಮತ್ತೊಂದಿಲ್ಲ. ಹರ್ಷ ಸಾಯಿ ಅವರು ಬಡವರಿಗಾಗಿ ದೊಡ್ಡ ಮಟ್ಟದಲ್ಲಿ ಸೇವೆ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿ ಸಮಾಜ ಸೇವೆ ನಡೆಯಬೇಕು ಎಂಬ ಉದ್ದೇಶದಿಂದ ನನ್ನ ಕೈಲಾದಷ್ಟು ಸೇವೆ ಮಾಡುತ್ತಿದ್ದೇನೆ" ಎಂದು ಅವರು ಹೇಳಿದರು. ಮಂಜುಳ ಅವರ ಕುಟುಂಬಕ್ಕೆ ನಿರ್ಮಿಸಲಾಗಿರುವ ನೂತನ ಮನೆಯ ಉದ್ಘಾಟನಾ ಕಾರ್ಯಕ್ರಮ ಇದೇ ಆಗಸ್ಟ್ 30ರಂದು ನಡೆಯಲಿದ್ದು, ಆಂಧ್ರಪ್ರದೇಶದ ಖ್ಯಾತ ಸಮಾಜ ಸೇವಕ ಹರ್ಷ ಸಾಯಿ ಅವರು ಆಗಮಿಸಿ ತಮ್ಮ ಅಮೃತ ಹಸ್ತದಿಂದ ಮನೆ ಉದ್ಘಾಟಿಸಲಿದ್ದಾರೆ. ಬಡ ಕುಟುಂಬವೊಂದರ ಬದುಕಿಗೆ ಹೊಸ ಸೂರು ಕಲ್ಪಿಸಿರುವ ಈ ಮಾನವೀಯ ಕಾರ್ಯಕ್ಕೆ ಸಾಕ್ಷಿಯಾಗಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಸಮಾಜ ಸೇವಾ ಮನೋಭಾವ ಹೊಂದಿರುವವರು, ಸಾರ್ವಜನಿಕರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕುಟುಂಬದ ಸಂತೋಷದಲ್ಲಿ ಪಾಲುದಾರರಾಗುವ ನಿರೀಕ್ಷೆ ಇದೆ. ಮನೆ ನಿರ್ಮಾಣ ಕಾರ್ಯಕ್ಕೆ ಬಂಗಾರಪೇಟೆ ಹಾಗೂ ಕೋಲಾರ ಭಾಗದ ಹಲವರು ಸಹಕಾರ ನೀಡಿದ್ದು, ಸಹಕರಿಸಿದ ಎಲ್ಲರಿಗೂ ರಾಜೇಂದ್ರ ಪ್ರಸಾದ್ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.
- ನಂಜನಗೂಡು : ಮಾದಕ ಜಾಲಕ್ಕೆ ಕಡಿವಾಣ ಹಾಕಿ.! ಪೊಲೀಸ್ ಇಲಾಖೆ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ.!?2
- *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್ ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.3
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.1
- ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!1
- ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ! ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ!1
- ಮುಳಬಾಗಿಲು : ಕಾಯಕ ತತ್ವದ ಮಹತ್ವ ಸಾರಿದ,ಶ್ರೀ ಶರಣ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ಸಿದ್ಧತೆ.!2