ರೋಣ ಪಟ್ಟಣದಲ್ಲಿ ಡೊನೇಷನ್ ಹಾವಳಿ ತಡೆಗಟ್ಟಲು ಮತ್ತು ಅನಧಿಕೃತ ತರಬೇತಿ ಕೇಂದ್ರಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಎಸ್ ಎಫ್ ಐ ಅಗ್ರಹ ವಿಪರೀತ ಡೊನೇಷನ್ ಹಾವಳಿ ತಡೆಗಟ್ಟುವಂತೆ ಮತ್ತು ಅನಧಿಕೃತವಾಗಿ ತೆರೆದಿರುವ ತರಬೇತಿ ಶಿಬಿರ ಕೇಂದ್ರಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗದಗ ಜಿಲ್ಲೆಯ ರೋಣ ಪಟ್ಟಣದ ರೋಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಹಸೀಲ್ದಾರರಿಗೆ ಎಸ್ ಎಫ್ ಐ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು, ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷ ಗಣೇಶ್ ರಾಥೋಡ್ ಮಾತನಾಡಿ 2026-27 ನೇ ಸಾಲಿನಲ್ಲಿ ಪ್ರಾರಂಭವಾಗುವ ಅನುದಾನಿತ, ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ, ಹೀಗಿರುವಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ, ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನೀತಿ-ನಿಯಮಗಳನ್ನು ಮೀರಿ ಡೊನೇಷನ್ ವಸೂಲಿಯಲ್ಲಿ ತೊಡಗಿವೆ,ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ,ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಕೂಡ ಖಾಸಗಿ ಶಾಲೆಗಳು ಎಗ್ಗಿಲ್ಲದೆ ವಸೂಲಿಯಲ್ಲಿ ತೊಡಗುವ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಆದೇಶಗಳಿಗೆ ಬೆಲೆ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ, ಕಾಳ ಸಂತೆಯಲ್ಲಿ ಶಿಕ್ಷಣ ಮಾರಾಟವಾಗುತ್ತಿದೆ ಜಿಲ್ಲೆಯಾದ್ಯಂತ ನಾಯಿ ಕೊಡೆಗಳಂತೆ ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಿವೆ, ಒಂದೆಡೆ ರಾಜ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುತ್ತಿದೆ, ತಾಲೂಕಿನಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೋನೆಷನ್ ಮನಬಂದತೆ ಪ್ರಾರಂಭವಾಗಿದೆ, ಬಡ ಹಿಂದುಳಿದ ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೋನೆಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ತುಂಬಾ ದುರದರಷ್ಟಕರವಾಗಿದೆ,ಶಿಕ್ಷಣ ಹಕ್ಕು ಕಾಯ್ದೆ 1983 ಮತ್ತು 2009ರ ಆರ್.ಟಿಇ ಕಾಯ್ದೆ ಜಾರಿಯಾದರೂ ಜಿಲ್ಲೆಯಲ್ಲಿ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ, ಆರ್.ಟಿ.ಇ ಸೀಟು ಮಧ್ಯವರ್ತಿಗಳ ಪಾಲಾಗುತ್ತಿವೆ,ಜಿಲ್ಲೆಯ ಬಹುತೇಕ ಖಾಸಗಿ ಶಾಲೆಗಳಲ್ಲಿ 30 ರಿಂದ 1 ಲಕ್ಷ ರೂ ವರೆಗೂ ಡೊನೇಷನ್ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ,ಹಾಗೂ ಅಕ್ರಮವಾಗಿ ಟ್ಯುಷನ್, ಟ್ಯೂಟರಿಯಲ್, ಅನದೀಕೃತವಾಗಿ ಐ ಸಿ ಎಸ್ಇ ,ಸಿಬಿಎಸ್ಇ ಹೆಸರಿನಲ್ಲಿ ಶಾಲೆಗಳು ನಡೆಯುತ್ತೀವೆ, ಸಮ್ಮರ ಕ್ಯಾಂಪ್ (ಬೇಸಿಗೆ ತರಬೇತಿ ಕೇಂದ್ರ) ಗಳ"ಇತ್ಯಾದಿ ಹೆಸರುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿ ಸರಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಗಲೂ ದರೋಡೆ ಮಾಡುತ್ತಿದ್ದು ಸಂಬಂಧಿಸಿದ ಅಧಿಕಾರಿಗಳು ಮೌನ ವಹಿಸಿರುವುದೇಕೆ? ಸರಕಾರದ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು 500 ರೂ.ಅನುದಾನರಹಿತ ಶಿಕ್ಷಣ ಸಂಸ್ಥೆಗಳು ರೂ.600 ಗಳನ್ನು ಮಾತ್ರ ಅಭಿವೃದ್ಧಿ ಶುಲ್ಕ (ಡೆವಲಪ್‌ಮೆಂಟ್ ಫೀ)ನ್ನು ಸಂಗ್ರಹಿಸಲು ಅವಕಾಶವಿದೆ, ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ, ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ, ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ 2009 ರ ಸೆಕ್ಷನ್ 13(2)(ಬಿ) ಹೇಳುತ್ತದೆ,ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ, ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10*6 ಸೈಜಿನಲ್ಲಿ ಪ್ಲೆಕ್ಸ್ ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್‌ನಲ್ಲಿ ಪುಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ ಆದರೆ ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ, ಸರ್ಕಾರದ ಸುತ್ತೋಲೆಯಲ್ಲಿ ಡಿ.ಡಿ.ಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರೀಶಿಲಿಸಬೇಕೆಂದು ಹೇಳಿದ್ದರೂ ಇಲಾಖಾ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರೀಶಿಲನೆ ಮಾಡಿರುವುದಿಲ್ಲ ಇದರಿಂದಾಗಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ನೋಟ್ ಬುಕ್, ಶಾಲಾ ಬ್ಯಾಗ್, ಬೂಟು, ಬಟ್ಟೆ, ಜಾಮಿಟ್ರಿ ಬಾಕ್ಸ್ ಕಡ್ಡಾಯವಾಗಿ ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ್ಪಟ್ಟು ಮಾಡಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಿ ಮತ್ತು ಜಿಲ್ಲೆಯ ಬಹುತೇಕ ಶಾಲೆಗಳು ಆಯುಕ್ತರ ಆದೇಶವನ್ನು ಉಲ್ಲಂಘಿಸಿದ್ದು, ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಮುಚ್ಚತಕ್ಕದ್ದು ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಸೇರಲು ಎಸ್.ಎಫ್.ಐ ತಾಲೂಕ ಸಮಿತಿಯ ಸದಸ್ಯರು ಒತ್ತಾಯಿಸಿದರು, ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ, ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ,ಎಸ್ ಎಫ್ ಐ ತಾಲೂಕು ಮುಖಂಡರಾದ ಶರಣಪ್ಪ ಮಾಟರಂಗಿ, ಮಲ್ಲಿಕಾರ್ಜುನ ಮುರಡಿ, ನಾಗರಾಜ್ ಅಂಗಡಿ, ಸುಪ್ರೀತ ಬೆಳವಟಗಿ,ಅನೀಲ, ಗೌತಮ್ ಇದ್ದರು.
ರೋಣ ಪಟ್ಟಣದಲ್ಲಿ ಡೊನೇಷನ್ ಹಾವಳಿ ತಡೆಗಟ್ಟಲು ಮತ್ತು ಅನಧಿಕೃತ ತರಬೇತಿ ಕೇಂದ್ರಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಎಸ್ ಎಫ್ ಐ ಅಗ್ರಹ ವಿಪರೀತ ಡೊನೇಷನ್ ಹಾವಳಿ ತಡೆಗಟ್ಟುವಂತೆ ಮತ್ತು ಅನಧಿಕೃತವಾಗಿ ತೆರೆದಿರುವ ತರಬೇತಿ ಶಿಬಿರ ಕೇಂದ್ರಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗದಗ ಜಿಲ್ಲೆಯ ರೋಣ ಪಟ್ಟಣದ ರೋಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಹಸೀಲ್ದಾರರಿಗೆ ಎಸ್ ಎಫ್ ಐ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು, ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷ ಗಣೇಶ್ ರಾಥೋಡ್ ಮಾತನಾಡಿ 2026-27 ನೇ ಸಾಲಿನಲ್ಲಿ ಪ್ರಾರಂಭವಾಗುವ ಅನುದಾನಿತ, ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ, ಹೀಗಿರುವಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ, ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನೀತಿ-ನಿಯಮಗಳನ್ನು ಮೀರಿ ಡೊನೇಷನ್ ವಸೂಲಿಯಲ್ಲಿ ತೊಡಗಿವೆ,ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ,ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಕೂಡ ಖಾಸಗಿ ಶಾಲೆಗಳು ಎಗ್ಗಿಲ್ಲದೆ
ವಸೂಲಿಯಲ್ಲಿ ತೊಡಗುವ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಆದೇಶಗಳಿಗೆ ಬೆಲೆ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ, ಕಾಳ ಸಂತೆಯಲ್ಲಿ ಶಿಕ್ಷಣ ಮಾರಾಟವಾಗುತ್ತಿದೆ ಜಿಲ್ಲೆಯಾದ್ಯಂತ ನಾಯಿ ಕೊಡೆಗಳಂತೆ ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಿವೆ, ಒಂದೆಡೆ ರಾಜ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುತ್ತಿದೆ, ತಾಲೂಕಿನಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೋನೆಷನ್ ಮನಬಂದತೆ ಪ್ರಾರಂಭವಾಗಿದೆ, ಬಡ ಹಿಂದುಳಿದ ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೋನೆಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ತುಂಬಾ ದುರದರಷ್ಟಕರವಾಗಿದೆ,ಶಿಕ್ಷಣ ಹಕ್ಕು ಕಾಯ್ದೆ 1983 ಮತ್ತು 2009ರ ಆರ್.ಟಿಇ ಕಾಯ್ದೆ ಜಾರಿಯಾದರೂ ಜಿಲ್ಲೆಯಲ್ಲಿ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ, ಆರ್.ಟಿ.ಇ ಸೀಟು ಮಧ್ಯವರ್ತಿಗಳ ಪಾಲಾಗುತ್ತಿವೆ,ಜಿಲ್ಲೆಯ ಬಹುತೇಕ ಖಾಸಗಿ ಶಾಲೆಗಳಲ್ಲಿ 30 ರಿಂದ 1 ಲಕ್ಷ ರೂ ವರೆಗೂ ಡೊನೇಷನ್ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ,ಹಾಗೂ ಅಕ್ರಮವಾಗಿ ಟ್ಯುಷನ್, ಟ್ಯೂಟರಿಯಲ್, ಅನದೀಕೃತವಾಗಿ ಐ ಸಿ ಎಸ್ಇ ,ಸಿಬಿಎಸ್ಇ ಹೆಸರಿನಲ್ಲಿ ಶಾಲೆಗಳು ನಡೆಯುತ್ತೀವೆ, ಸಮ್ಮರ ಕ್ಯಾಂಪ್ (ಬೇಸಿಗೆ ತರಬೇತಿ ಕೇಂದ್ರ) ಗಳ"ಇತ್ಯಾದಿ ಹೆಸರುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ
ಮಾಡಿ ಸರಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಗಲೂ ದರೋಡೆ ಮಾಡುತ್ತಿದ್ದು ಸಂಬಂಧಿಸಿದ ಅಧಿಕಾರಿಗಳು ಮೌನ ವಹಿಸಿರುವುದೇಕೆ? ಸರಕಾರದ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು 500 ರೂ.ಅನುದಾನರಹಿತ ಶಿಕ್ಷಣ ಸಂಸ್ಥೆಗಳು ರೂ.600 ಗಳನ್ನು ಮಾತ್ರ ಅಭಿವೃದ್ಧಿ ಶುಲ್ಕ (ಡೆವಲಪ್‌ಮೆಂಟ್ ಫೀ)ನ್ನು ಸಂಗ್ರಹಿಸಲು ಅವಕಾಶವಿದೆ, ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ, ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ, ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ 2009 ರ ಸೆಕ್ಷನ್ 13(2)(ಬಿ) ಹೇಳುತ್ತದೆ,ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ, ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10*6 ಸೈಜಿನಲ್ಲಿ ಪ್ಲೆಕ್ಸ್ ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್‌ನಲ್ಲಿ ಪುಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ ಆದರೆ ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ, ಸರ್ಕಾರದ ಸುತ್ತೋಲೆಯಲ್ಲಿ
ಡಿ.ಡಿ.ಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರೀಶಿಲಿಸಬೇಕೆಂದು ಹೇಳಿದ್ದರೂ ಇಲಾಖಾ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರೀಶಿಲನೆ ಮಾಡಿರುವುದಿಲ್ಲ ಇದರಿಂದಾಗಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ನೋಟ್ ಬುಕ್, ಶಾಲಾ ಬ್ಯಾಗ್, ಬೂಟು, ಬಟ್ಟೆ, ಜಾಮಿಟ್ರಿ ಬಾಕ್ಸ್ ಕಡ್ಡಾಯವಾಗಿ ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ್ಪಟ್ಟು ಮಾಡಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಿ ಮತ್ತು ಜಿಲ್ಲೆಯ ಬಹುತೇಕ ಶಾಲೆಗಳು ಆಯುಕ್ತರ ಆದೇಶವನ್ನು ಉಲ್ಲಂಘಿಸಿದ್ದು, ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಮುಚ್ಚತಕ್ಕದ್ದು ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಸೇರಲು ಎಸ್.ಎಫ್.ಐ ತಾಲೂಕ ಸಮಿತಿಯ ಸದಸ್ಯರು ಒತ್ತಾಯಿಸಿದರು, ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ, ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ,ಎಸ್ ಎಫ್ ಐ ತಾಲೂಕು ಮುಖಂಡರಾದ ಶರಣಪ್ಪ ಮಾಟರಂಗಿ, ಮಲ್ಲಿಕಾರ್ಜುನ ಮುರಡಿ, ನಾಗರಾಜ್ ಅಂಗಡಿ, ಸುಪ್ರೀತ ಬೆಳವಟಗಿ,ಅನೀಲ, ಗೌತಮ್ ಇದ್ದರು.
- ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.1
- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ. ಕುಷ್ಟಗಿ:- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕುಷ್ಟಗಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ, ದ್ವೀತಿಯ ಮತ್ತು ಅತಿ ಹೆಚ್ಚು ಅಂಕಪಡೆದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೆಂಕಪ್ಪ ವಾಲಿಕಾರ ತಿಳಿಸಿದರು. ಇಲ್ಲಿನ ಹಳೆ ಪ್ರವಾಸಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು 2025- 2026ನೇ ಸಾಲಿನ ಈ ವರ್ಷದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಮುದೇನೂರು ಗ್ರಾಮದಲ್ಲಿ ಹಮ್ಮಿಕೊಳ್ಳಬೇಕಾಗಿತ್ತು. ಕಾರಣಾಂತರಗಳಿಂದ ಮುದೇನೂರು ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಆಗುವುದಿಲ್ಲ ಆದರೆ ಮುಂದಿನ ತಿಂಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳಿಂದ ಮತ್ತು ಎಲ್ಲಾ ಸದಸ್ಯರಿಂದ ಒಪ್ಪಿಗೆ ಪಡೆಯಲಾಗಿದೆ. ಮುಂದಿನ ದಿನಮಾನದಲ್ಲಿ ಯಾವ ಕಡೆ ಸಮ್ಮೇಳನ ನೆಡೆಸಿದರೆ ಸೂಕ್ತ ಆಗುತ್ತದೆ ಎಂಬ ತೀರ್ಮಾನ ತೆಗೆದುಕೊಂಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವದು ಎಂದರು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್.ಎಸ್‌ಎಲ್.ಸಿ. ಮತ್ತು ಯುಪಿಸಿ ಮಕ್ಕಳಿಗೆ ವಿಶೇಷ ಸನ್ಮಾನ ಸಮಾರಂಭ ಏರ್ಪಡಿಸಿಲಾಗುತ್ತಿದೆ ಆದ್ದರಿಂದ ತಾಲೂಕಿನ ಪ್ರಥಮ, ದ್ವೀತಿಯ ಸ್ಥಾನದಲ್ಲಿ ಹಾಗೂ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನಿಸಲಾಗುವದು ಈ ಒಂದು ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಲಹೆ ಸಹಕಾರ ಬಹಳ ಅಗತ್ಯವಾಗಿದ್ದು ಈ ಒಂದು ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪಾಟೀಲ ಮಾತನಾಡಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸೂಕ್ತ ತೀರ್ಮಾನ ತೆಗೆದುಕೊಂಡು ಸಭೆ ಸಮಾರಂಭ ಏರ್ಪಡಿಸಬೇಕಾಗುತ್ತದೆ ಈ ವರ್ಷದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಷ್ಟಗಿ ತಾಲೂಕಿನಲ್ಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಪ್ರತಿಯೊಬ್ಬರ ಸಲಹೆ ಸಹಕಾರ ಅಗತ್ಯವಾಗಿದೆ ಸೂಕ್ತ ನಿರ್ಧಾರದೊಂದಿಗೆ ಜಿಲ್ಲಾ ಸಮ್ಮೇಳನ ನಡೆಸಲಾಗುವದು ಎಂಬ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶರಣಪ್ಪ ವಡಗೇರಿ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹನಮೇಶ ಗುಮಗೇರಾ, ರವೀಂದ್ರ ಬಾಕಳೆ, ಉಮೇಶ ಹಿರೇಮಠ, ಸಾಹಿತಿಗಳಾದ ಅಮರೇಗೌಡ ಪಾಟೀಲ ಜಾಲಿಹಾಳ, ದೇವರಾಜ ವಿಶ್ವ ಕರ್ಮ, ದೊಡ್ಡಪ್ಪ ಕೈಲವಾಡಗಿ, ಹ.ಯ.ಈಟಿಯವರ್, ಆರ್.ಕೆ.ಸುಬೇದಾರ, ವಿದ್ಯಾ ಕಂಪಾಪೂರಮಠ, ಎಸ್.ಜೆ.ಕಡೆಮನಿ, ಶ್ರೀನಿವಾಸ ಕಟ್ಲಿ, ನಿಂಗಪ್ಪ ಸಜ್ಜನ್, ಚನ್ನಪ್ಪ ಬಾವಿಮನಿ, ಸಂತೋಷ ತೋಟದ್, ಹನಮೇಶ ಶಾಖಾಪೂರ, ಕ.ಕಾ.ಪ.ಸ.ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲಲಿತಮ್ಮ ಹಿರೇಮಠ ಇವರಿಗೆ ಸನ್ಮಾನಿಸಿ ಗೌರವಿಸಿದರು.2
- ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದ ಶ್ರೀಗಳು ಇಳಕಲ್: ಮಹಾಂತ ಜೋಳಿಗೆಯ ಶಿವಶಿಲ್ಪಿ ಡಾ.ಮಹಾಂತ ಶ್ರೀಗಳ ೮ನೇ ಪುಣ್ಯಸ್ಮರಣೆ ನಿಮಿತ್ತ ತಾಲೂಕಿನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದರು. ಶರಣ ಸಿದ್ಧಾಂತ ವಿದ್ಯಾಪೀಠದಡಿ ಭಾನುವಾರ ಗ್ರಾಮದಲ್ಲಿ ಮಹಾಂತ ಜೋಳಿಗೆಯೊಂದಿಗೆ ಶ್ರೀಗಳು ಸಂಚಾರ ನಡೆಸಿದರು. ಮನೆ, ಮನೆಗೆ ತೆರಳಿ ಭಕ್ತರಿಗೆ ದುಶ್ಚಟಗಳನ್ನು ತ್ಯಜಿಸಲು ಸಲಹೆ ನೀಡಿದರು. ಅಲ್ಲದೇ ಕೆಲ ಯುವಕರು ಸ್ವ ಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಹೇಳಿ ಮಹಾಂತ ಜೋಳಿಗೆ ಮೇಲೆ ಪ್ರಮಾಣ ಮಾಡಿದರು. "ಚಿಕ್ಕ ಕೊಡಗಲಿ ಗ್ರಾಮ ಭಕ್ತಿಯ ಬೀಡು. ಯುವಕರು ಸೇರಿದಂತೆ ಎಲ್ಲರೂ ದುಶ್ಚಟಗಳನ್ನು ತ್ಯಜಿಸಿ ಅರೋಗ್ಯಯುತ ಬದುಕು ಸಾಗಿಸಬೇಕು,'' ಎಂದು ಗುರುಮಹಾಂತ ಶ್ರೀಗಳು ಸಲಹೆ ನೀಡಿದರು. ಈ ವೇಳೆ ಗ್ರಾಮದ ಅಯರು ಮತ್ತು ಭಕ್ತರು ಇದ್ದರು.1
- ರೈಲ್ವೆ ಕಾಮಗಾರಿಯ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು: ಗ್ರಾಮಸ್ಥರಲ್ಲಿ ಆತಂಕ ಕುಷ್ಟಗಿ: ತಾಲೂಕಿನ ವಿವಿಧೆಡೆ ರೈಲ್ವೆ ಇಲಾಖೆಯ ಕಾಮಗಾರಿಗಾಗಿ ಮಣ್ಣು (ಮರಂ) ತೆಗೆಯಲು ನಿರ್ಮಿಸಲಾಗಿರುವ ಆಳವಾದ ಕಂದಕಗಳು ಇದೀಗ ಸಾವಿನ ಬಲೆಗಳಾಗಿ ಪರಿಣಮಿಸುತ್ತಿರುವ ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ವಣಗೇರಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದ ನೀರು ತುಂಬಿದ ಕಂದಕದಲ್ಲಿ ಈಜಲು ತೆರಳಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ವಣಗೇರಿ ಗ್ರಾಮದ ಸರ್ವೇ ನಂ. 24/1/3ರ ಜಮೀನಿನಲ್ಲಿ ರೈಲ್ವೆ ಕಾಮಗಾರಿಗಾಗಿ ಸುಮಾರು 6 ಎಕರೆ ಪ್ರದೇಶದಲ್ಲಿ ಮಣ್ಣು ತೆಗೆಯಲಾಗಿತ್ತು. ಇದರಿಂದ ಸುಮಾರು 45ರಿಂದ 50 ಅಡಿ ಆಳದ ಬೃಹತ್ ಕಂದಕ ನಿರ್ಮಾಣವಾಗಿದ್ದು, ಮಳೆ ಹಾಗೂ ಬಸಿ ನೀರು ತುಂಬಿ ಸಂಪೂರ್ಣ ಜಲಾವೃತಗೊಂಡಿತ್ತು. ಕೆ.ಬೋದೂರು ಗ್ರಾಮದ ಹನುಮಂತಪ್ಪ ತಂದೆ ಬಸವರಾಜ ಗೊರೆಬಾಳ (17) ಹಾಗೂ ಇನ್ನೊಬ್ಬ ಬಾಲಕ ಈಜಲು ಕಂದಕದ ಬಳಿ ತೆರಳಿದ್ದ ವೇಳೆ, ಆಳದ ಅರಿವಿಲ್ಲದೆ ನೀರಿನ ಸೆಳೆತಕ್ಕೆ ಸಿಲುಕಿ ಹನುಮಂತಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ ಅಶೋಕ ಶಿಗ್ಗಾಂವಿ, ಅಗ್ನಿಶಾಮಕ ಠಾಣಾಧಿಕಾರಿ ಮಾಳಿಂಗರಾಯ ಹಾಗೂ ಸಿಬ್ಬಂದಿ, ಕುಷ್ಟಗಿ ಪಿಎಸ್‌ಐ ಹನಮಂತಪ್ಪ ತಳವಾರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿತು. ನಿನ್ನೆ ಆರಂಭವಾದ ನಿರಂತರ ಕಾರ್ಯಾಚರಣೆಯ ಬಳಿಕ ಇಂದು ಬೆಳಿಗ್ಗೆ ಸುಮಾರು 9.30ಕ್ಕೆ ಬಾಲಕನ ಮೃತದೇಹ ಪತ್ತೆಯಾಯಿತು. ವಣಗೇರಿ ಮಾತ್ರವಲ್ಲದೆ ತಾಲೂಕಿನ ಟೆಂಗುಂಟಿ, ಕೆ.ಹೊಸೂರು, ಕಂದಕೂರು ಹಾಗೂ ಜಿ.ಗಂಗನಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈಲ್ವೆ ಯೋಜನೆಗಾಗಿ ಮಣ್ಣು ಮತ್ತು ಮರಳು ತೆಗೆಯಲಾಗಿದ್ದು, ಆಳವಾದ ಕಂದಕಗಳು ನಿರ್ಮಾಣಗೊಂಡಿವೆ. ಕೆಲವೆಡೆ ನೀರು ತುಂಬಿಕೊಂಡಿದ್ದು, ಇನ್ನೂ ಕೆಲವು ಸ್ಥಳಗಳಲ್ಲಿ ಅಪಾಯಕಾರಿಯಾಗಿ ತೆರೆದ ಸ್ಥಿತಿಯಲ್ಲಿವೆ. ಇದರಿಂದ ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯ ಎದುರಾಗುವ ಭೀತಿ ಹೆಚ್ಚಾಗಿದೆ. ಸುರಕ್ಷತಾ ಕ್ರಮಗಳಿಲ್ಲದೆ ಕಂದಕಗಳನ್ನು ಬಿಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನ ಮಾಲೀಕರು ಹಾಗೂ ರೈಲ್ವೆ ಕಾಮಗಾರಿ ನಿರ್ವಹಣೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಹಾಗೂ ರೈಲ್ವೆ ಇಲಾಖೆ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದಲ್ಲದೆ, ಅಪಾಯಕಾರಿ ಕಂದಕಗಳ ಸುತ್ತ ತಂತಿ ಬೇಲಿ ಅಳವಡಿಸುವುದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.4
- ಕುಷ್ಟಗಿ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, 14ನೇ ಶತಮಾನದ ಈ ಭಕ್ತೆಯು ತಮ್ಮ ತ್ಯಾಗ, ಭಕ್ತಿ ಹಾಗೂ ಧಾರ್ಮಿಕ ನಿಷ್ಠೆಯಿಂದ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು. ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು.1
- ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.2
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.1
- ಹುನಗುಂದ ಸಮೀಪದ ಟೋಲ್ ಬಳಿ ಧಗ ಧಗ ಹೊತ್ತಿ ಉರಿದ ಭತ್ತ ಹೊತ್ತ ಲಾರಿ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಮಧ್ಯದ ಟೋಲ್ ನಾಕಾ ಬಳಿ ಭತ್ತ ಹೊತ್ತ ಬರುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಮೇ ೧೦ ರಾತ್ರಿ ಸಮಯದಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ಲಾರಿ ಭತ್ತವನ್ನು ಹೊತ್ತುಕೊಂಡ ಹುನಗುಂದ ಮಾರ್ಗವಾಗಿ ತೆರಳಬೇಕಾಗಿದ್ದ ಲಾರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಲಾರಿ ಬಾಲಕಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಾತ್ರಿ ಹತ್ತಿದ ಬೆಂಕಿ ಮುಂಜಾನೆಯವರೆಗೂ ಉರಿಯುತ್ತಿದ್ದರೂ,ಅಗ್ನಿಶಾಮಕ ದಳದ ಸಿಬ್ಬಂದಿಯಾಗಲಿ ಅಥವಾ ಟೋಲ್ ನಾಕಾ ಸಿಬ್ಬಂದಿಯಾಗಲಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ಕುರಿತು ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1